ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗೇ ಆಗ್ತಾರೆ. ಅಧಿವೇಶನ ಮುಗಿಯುತ್ತಿದ್ದೆಂತೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ.ಶಿವಕುಮಾರ್ ಕಷ್ಟಪಟ್ಟಿದ್ದಕ್ಕೆ ಫಲ ಸಿಕ್ಕೇ ಸಿಗುತ್ತದೆ. ಅಧಿವೇಶನ ಮುಗಿದ ಬಳಿಕ ಆ ಫಲ ಸಿಗುತ್ತದೆ. ನಂಬರ್ ಮುಖ್ಯವಲ್ಲ, ಹೈಕಮಾಂಡ್ ನಿರ್ದೇಶನ ಮುಖ್ಯ. ಹೈಕಮಾಂಡ್ ನಾಯಕರು ತೀರ್ಮಾನಿಸಬೇಕು ಎಂದರು.
ಸಂಕ್ರಾಂತಿಯಲ್ಲ, ಅಧಿವೇಶನ ಮುಗಿಯುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ. ಗುರುವಾಅರ ನಾವು 55 ಶಾಸಕರು ಊಟಕ್ಕೆ ಸೇರಿದ್ದೆವು. ಊಟ ಮಾಡಿದ್ದೇವೆ ಅಷ್ಟೆ. ನಮಗೆ ಡಿ.ಕೆ.ಶಿವಕುಮಾರ್ ಸಿಎಂ ಅಗಬೇಕು. ಆಗ್ತಾರೆ ಎಂದರು.
