ಬೆಳಗಾವಿ: ವಿದ್ಯಾರ್ಥಿನಿಯರೊಂದಿಗೆ ಪ್ರಾಂಶುಪಾಲನೇ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಗಾವಿಯ ಬೆಳಗುಂದಿಯಲ್ಲಿ ನಡೆದಿದೆ.
ಬೆಳಗುಂದಿ ಪ್ರೌಢಶಾಲೆಯ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಪ್ರಾಂಶುಪಾಲ ಅಸಭ್ಯವಾಗಿ ವರ್ತಿಸಿದ್ದ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ದೂರು ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಹಾಗೂ ಸ್ಥಳೀಯರು ಶಾಲೆಗೆ ನುಗ್ಗಿ ಪ್ರಾಂಶುಪಾಲನನ್ನು ಹಿಡಿದು ಥಳಿಸಿದ್ದಾರೆ.
ವಿದ್ಯಾರ್ಥಿನಿಯರು ಕೂಡ ಪ್ರಾಂಶುಪಾಲ ಕಲ್ಲಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
