ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉತ್ತರ ನೀಡಿದರು.

ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read