HomeUncategorized5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಡಿ.21 ರಿಂದ 24 ವರೆಗೆ ಪಲ್ಸ್ ಪೋಲಿಯೋ:...

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಡಿ.21 ರಿಂದ 24 ವರೆಗೆ ಪಲ್ಸ್ ಪೋಲಿಯೋ: ಕಡ್ಡಾಯವಾಗಿ ಲಸಿಕೆ ಹಾಕಿಸಿ

ಡಿಸೆಂಬರ್ 21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮಗುವಿನ ಭವಿಷ್ಯದ ಹಿತದೃಷ್ಠಿಯಿಂದ ತಮ್ಮ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು.

ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಭೀತಿಯನ್ನುಂಟು ಮಾಡುತ್ತಿದ್ದು, ನಮ್ಮ ದೇಶದಲ್ಲೂ ಮರುಗಳಿಸುವ ಸಾಧ್ಯತೆ ಇದೆ. ಪ್ರತಿ ಬಾರಿಯೂ 2 ಹನಿ ಪೋಲಿಯೋ ಹಾಕಿಸಿ ನಿಮ್ಮ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ. ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರೆಸಲು ನಮ್ಮ ಜೊತೆ ಕೈಜೋಡಿಸಿ.

ಹಾಗೆಯೇ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಯಾರೂ ಸುಳ್ಳು ವದಂತಿಗಳನ್ನು ಹರಡಬಾರದು. ಒಂದು ವೇಳೆ ಯಾರಾದರೂ ಸುಳ್ಳು ವದಂತಿಗಳನ್ನು ಹರಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular