HomeLatest NewsGOOD NEWS : ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ಗ್ರಾಮಗಳಲ್ಲಿ ಉಪಕೇಂದ್ರ...

GOOD NEWS : ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ನಿರ್ಧಾರ

ಬೆಂಗಳೂರು : ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಉತ್ತರ ನೀಡಿದರು.ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ (6) ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ ಎಂದರು.

ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇರೆಗೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ / ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನ ಸುವಿಧಾ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
https://twitter.com/KarnatakaVarthe/status/1999406032989163582/photo/1

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular