HomeLatest Newsಕನ್ನಡ ಚಿತ್ರರಂಗದ ಖ್ಯಾತ ಮೇಕಪ್ ಕಲಾವಿದೆ ಹೇಮಲತಾರ ರಾಜ್ಯೋತ್ಸವ ಪ್ರಶಸ್ತಿ ಸೇರಿ ಚಿನ್ನಾಭರಣ ಕಳವು: ಘಟನೆ...

ಕನ್ನಡ ಚಿತ್ರರಂಗದ ಖ್ಯಾತ ಮೇಕಪ್ ಕಲಾವಿದೆ ಹೇಮಲತಾರ ರಾಜ್ಯೋತ್ಸವ ಪ್ರಶಸ್ತಿ ಸೇರಿ ಚಿನ್ನಾಭರಣ ಕಳವು: ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಗಳು ಅರೆಸ್ಟ್

ತುಮಕೂರು: ಕನ್ನಡ ಚಿತ್ರರಂಗದ ಖ್ಯಾತ ಮೇಕಪ್ ಕಲಾವಿದೆ ಹೇಮಲತಾ ಅವರ ಮನೆಯಲ್ಲಿ ಕಳ್ಳತನವಾಗಿದೆ. ತುಮಕೂರು ಜಿಲ್ಲೆ ತಿಪಟೂರು ಪಟ್ಟಣದ ಹೇಮಲತಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಹೇಮಲತಾ ಅವರಿಗೆ ದೊರೆತ ರಾಜ್ಯೋತ್ಸವ ಪ್ರಶಸ್ತಿಯ 20 ಗ್ರಾಂ ಚಿನ್ನದ ಮೆಡಲ್ ಸಹಿತ 90 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಾಗ ಮನೆ ಕೆಲಸಕ್ಕೆ ಬರುತ್ತಿದ್ದ ಮೂವರು ಕೃತ್ಯವೆಸಗಿದ್ದಾರೆ.

ಶಂಕರ ಬಾಬು(26), ಗುರುರಾಜ(33), ಮನೋಜ್(18) ಬಂಧಿತ ಆರೋಪಿಗಳು. ಹೇಮಲತಾ ಅವರು ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದಾರೆ. ಕೆಲಸಕ್ಕೆ ಬಂದಾಗ ಬ್ಯಾಗ್ ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ಈ ಕಳ್ಳರು ದೋಚಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular