ಚಾಮರಾಜನಗರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರದಲ್ಲಿ ನಡೆದಿದೆ.
ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡವರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದರು. ಇನ್ನು ಎರಡು ತಿಂಗಳಲ್ಲಿ ಅವರ ನರ್ಸಿಂಗ್ ಕೋರ್ಸ್ ಮುಗಿಯುತ್ತಿತ್ತು.
ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಕೊಳ್ಳೇಗಾಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

