HomeLatest NewsBREAKING: ಹೊಸ ವರ್ಷಾಚರಣೆ ಹಿನ್ನೆಲೆ: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲೆ ಹೈ ಅಲರ್ಟ್

BREAKING: ಹೊಸ ವರ್ಷಾಚರಣೆ ಹಿನ್ನೆಲೆ: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲೆ ಹೈ ಅಲರ್ಟ್

ಬೆಂಗಳೂರು: ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಈಗಿನಿಂದಲೆ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲೆಡೆ ತೀವ್ರ ನಿಗಾ ವಹಿಸಲಾಗಿದೆ. ದೆಹಲಿಯಲ್ಲಿ ಕಾರ್ ಬಾಂಬ್ ಸ್ಫೋಟ್ ಬೆನ್ನಲ್ಲೇ ಈ ಬಾರಿ ಹೊಸ ವರ್ಷಾಚರಣೆಗೆ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಪ್ರಾಯೋಗಿಕವಾಗಿ ಡ್ರೋನ್ ಹಾರಾಟ ನಡೆಸಲಾಗಿದೆ. ಪೊಲೀಸ್ ಸಿಬ್ಬಂದಿಗಳಿಗೂ ಡ್ರೋನ್ ಹಾರಾಟ ತರಬೇತಿ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular