HomeLatest NewsBREAKING: ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ದುರಂತ: ಕಾರ್ಮಿಕ ಸಾವು

BREAKING: ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ದುರಂತ: ಕಾರ್ಮಿಕ ಸಾವು

ಬಾಗಲಕೋಟೆ: ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ಕಾರ್ಮಿಕ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ನಡೆದಿದೆ.

ಚಿನಗುಂಡಿಯ ಹನುಮಂತ ಮೆಳ್ಳಿಗೇರಿ (28) ಮೃತ ಕಾರ್ಮಿಕ. ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ವೇಳೆ ಕಲ್ಲು ಕುಸಿದು ದುರಂತ ಸಂಭವಿಸ್ದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular