HomeLatest NewsBIG BREAKING NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವಿಧಿವಶ

BIG BREAKING NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ(94) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಶಾಮನೂರು ಶಿವಶಂಕರಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಪಿಸಿಸಿ ಖಜಾಂಚಿಯಾಗಿ ಅನೇಕ ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆರು ಬಾರಿ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.

1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುಭವಿ ಕಾಂಗ್ರೆಸ್ಸಿಗರಾದ ಅವರು ಕಳೆದ ಮೂರು ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿದ್ದಾರೆ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿದ್ದಾರೆ, ಅವರು ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಪ್ರಸಿದ್ಧ ಶಿಕ್ಷಣ ತಜ್ಞ ಮತ್ತು ಕೈಗಾರಿಕೋದ್ಯಮಿಯಾಗಿ, ಅವರು ಬಾಪೂಜಿ ಶೈಕ್ಷಣಿಕ ಸಂಘದ ಅಧ್ಯಕ್ಷರಾಗಿದ್ದಾರೆ, ಇದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಉನ್ನತ ಶಿಕ್ಷಣದ ಅನೇಕ ವೃತ್ತಿಪರ ಸಂಸ್ಥೆಗಳನ್ನು ಒಳಗೊಂಡಂತೆ ಶಿಕ್ಷಣ ಸಂಸ್ಥೆಗಳ ಸರಪಣಿಯನ್ನು ಹೊಂದಿದೆ,

ಶಾಮನೂರು ಗ್ರೂಪ್ ಎಂದು ಕರೆಯಲ್ಪಡುವ ಕೈಗಾರಿಕೆಗಳ ಗುಂಪನ್ನು ಸಹ ಹೊಂದಿದೆ, ಇದು ಸಕ್ಕರೆ ಮತ್ತು ಡಿಸ್ಟಿಲರಿಗಳನ್ನು ತಮ್ಮ ಪ್ರಮುಖ ವ್ಯವಹಾರವಾಗಿ ಹೊಂದಿದೆ. ಅವರು 1970 ರ ಕನ್ನಡ ಚಲನಚಿತ್ರ ಬೋರೇಗೌಡ ಬೆಂಗಳೂರಿನ ಬಂದ ಚಿತ್ರದ ಸಹ-ನಿರ್ಮಾಪಕರಾಗಿದ್ದರು.

ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದಾರೆ. 1994, 2004, 2008, 2013, 2018, 2023 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular