HomeLatest Newsಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ಪರೀಕ್ಷೆ ಮುಂದೂಡಿಕೆ

ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ಪರೀಕ್ಷೆ ಮುಂದೂಡಿಕೆ

ದಾವಣಗೆರೆ: ದಾವಣಗೆರೆಯ ಬಾಪೂಜಿ ವಿದ್ಯಾಸಂಸ್ಥೆಯ ಮುಖ್ಯಸ್ಥರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಶಾಸಕ, ಮಾಜಿ ಸಚಿವರಾದ ಡಾ. ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಾವಣಗೆರೆ ವಿಶ್ವವಿದ್ಯಾಲಯದ ಶಿವ ಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಜಿ.ಆರ್ ಹಳ್ಳಿ ಚಿತ್ರದುರ್ಗ ಹಾಗೂ ಎಲ್ಲಾ ಘಟಕ ಕಾಲೇಜುಗಳಿಗೆ ಡಿಸೆಂಬರ್ 15 ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ದಾವಣಗೆರೆ ವಿವಿ ಕುಲಸಚಿವ ಎಸ್.ಎ. ಘಂಟಿ ತಿಳಿಸಿದ್ದಾರೆ.

ಪರೀಕ್ಷೆ ಮುಂದೂಡಿಕೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ನಡೆಯಬೇಕಿದ್ದ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಬದಲಿ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲ ಸಚಿವ ಪ್ರೊ. ಸಿ.ಕೆ. ರಮೇಶ್ ತಿಳಿಸಿದ್ದಾರೆ.

ಶಾಲೆಗಳಿಗೆ ರಜೆ ಘೋಷಣೆ

ಡಾ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಡಿಸೆಂಬರ್ 15ರಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಪೂರ್ತಿ ದಿನ ಶಾಲೆ ನಡೆಸಿ ಸರಿದೂಗಿಸಲು ಡಿಡಿಪಿಐ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular