HomeLatest NewsGST ಇಳಿಕೆ ಖುಷಿಯಲ್ಲಿ ಹೊಸ ವರ್ಷಕ್ಕೆ ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಟಿವಿ...

GST ಇಳಿಕೆ ಖುಷಿಯಲ್ಲಿ ಹೊಸ ವರ್ಷಕ್ಕೆ ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಟಿವಿ ದರ ಶೇ. 4ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಸರಕು ಮತ್ತು ಸೇವಾ ದರ(ಜಿಎಸ್‌ಟಿ) ಕಡಿತದ ಖುಷಿಯಲ್ಲಿ ಮುಂದಿನ ತಿಂಗಳಲ್ಲಿ ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜನವರಿಯಿಂದ ಎಲ್ಇಡಿ ಟಿವಿ ದರ ಶೇಕಡ 3ರಿಂದ 4ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಮೊರಿ ಚಿಪ್ ಗಳ ಕೊರತೆ, ಚಿಪ್ ಬೆಲೆ ಹೆಚ್ಚಳ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಟಿವಿ ದರ ಏರಿಕೆಯಾಗಲಿದೆ ಎಂದು ಉತ್ಪಾದಕರು ಹೇಳಿದ್ದಾರೆ.

ದೇಶದಲ್ಲಿ ತಯಾರಿಸುವ ಎಲ್ಇಡಿ ಟಿವಿಗಳಲ್ಲಿ ಶೇಕಡ 30ರಷ್ಟು ಭಾಗ ಮಾತ್ರ ಮೇಡ್ ಇನ್ ಇಂಡಿಯಾದ್ದು. ಓಪನ್ ಸೆಲ್ ಸೆಮಿ ಕಂಡಕ್ಟರ್ ಚಿಪ್ ಗಳು ಮತ್ತು ಮದರ್ ಬೋರ್ಡ್ ಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ರೂಪಾಯಿ ಮೌಲ್ಯ ಕುಸಿತದ ಕಾರಣ ಬಿಡಿ ಭಾಗಗಳ ಆಮದು ದರ ದುಬಾರಿಯಾಗುತ್ತಿದೆ. ಈ ನಡುವೆ ಕಳೆದ ಮೂರು ನಾಲ್ಕು ತಿಂಗಳಿಂದ ಎಐ ಸರ್ವರ್ ಗಳಿಗೆ ಹೈ ಬ್ರಾಂಡ್ ವಿಡ್ತ್ ಮೆಮೊರಿ ಚಿಪ್ ಕೊರತೆ ಕಂಡು ಬಂದಿದೆ. ಹೊಸ ವರ್ಷದ ವೇಳೆಗೆ ಚಿಪ್ ಕೊರತೆ, ರೂಪಾಯಿ ಮೌಲ್ಯ ಕುಸಿತದ ಪರಿಣಾಮ ಟಿವಿ ದರ ಶೇಕಡ 3ರಿಂದ 4ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular