HomeLatest NewsBREAKING : ಇಂದು ಸಂಜೆ ದಾವಣಗೆರೆಯಲ್ಲಿ ಪತ್ನಿ ಸಮಾಧಿ ಪಕ್ಕದಲ್ಲೇ  'ಶಾಮನೂರು ಶಿವಶಂಕರಪ್ಪ' ಅಂತ್ಯ ಸಂಸ್ಕಾರ.!

BREAKING : ಇಂದು ಸಂಜೆ ದಾವಣಗೆರೆಯಲ್ಲಿ ಪತ್ನಿ ಸಮಾಧಿ ಪಕ್ಕದಲ್ಲೇ  ‘ಶಾಮನೂರು ಶಿವಶಂಕರಪ್ಪ’ ಅಂತ್ಯ ಸಂಸ್ಕಾರ.!

ದಾವಣಗೆರೆ : ಮಾಜಿ ಸಚಿವರು ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಇಂದು ಸೋಮವಾರ ದಾವಣಗೆರೆ ಮನೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 10.30 ಗಂಟೆ ತನಕ ಪೂಜೆ ಹಾಗೂ ಕುಟುಂಬಸ್ಥರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ದಾವಣಗೆರೆ ಹೈ ಸ್ಕೂಲ್ ಮೈದಾನದಲ್ಲಿ ಸೋಮವಾರ ಮಧ್ಯಾಹ್ನ12 ಗಂಟೆಯಿಂದ – 3 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪತ್ನಿಪಾರ್ವತಮ್ಮ ಸಮಾಧಿ ಪಕ್ಕದಲ್ಲೇ  ‘ಶಾಮನೂರು ಶಿವಶಂಕರಪ್ಪ’ ಅಂತ್ಯ ಸಂಸ್ಕಾರ ನಡೆಯಲಿದೆ.

ಇಂದು ಸಂಜೆ 4.30 ಗಂಟೆಗೆ ಅಂತಿಮ ವಿಧಿವಿಧಾನಗಳನ್ನು ದಾವಣಗೆರೆಯ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular