HomeLatest Newsಕೇಂದ್ರ ಸರ್ಕಾರ ಪ್ರತಿನಿಧಿಸುವ ವಕೀಲರ ಸಹಿ ನಕಲು ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ

ಕೇಂದ್ರ ಸರ್ಕಾರ ಪ್ರತಿನಿಧಿಸುವ ವಕೀಲರ ಸಹಿ ನಕಲು ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ

ಬೆಂಗಳೂರು: ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ಕೋರ್ಟ್ ಗೆ ಸಲ್ಲಿಸಿದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಅಪರಾಧದಡಿ ನಾಲ್ಕು ತಿಂಗಳು ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ಕೋರಮಂಗಲದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋ ಫಿಸಿಕ್ಸ್ ಸಂಸ್ಥೆಯ ಎರಡನೇ ಬ್ಲಾಕ್ ನಿವಾಸಿ ಕೆ. ಧನಂಜಯ್(48) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿದ್ದ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.

ವಕೀಲ ಎಲ್. ಹರೀಶ್ ಕುಮಾರ್ ಸಹಿಯನ್ನು ಧನಂಜಯ ಫೋರ್ಜರಿ ಮಾಡಿದ್ದು ನ್ಯಾಯಾಂಗ ನಿಂದನೆ ಅಪರಾಧವಾಗಿದೆ. ದೋಷಿಗೆ ನಾಲ್ಕು ತಿಂಗಳ ಸಾಧಾರಣ ಜೈಲು ಶಿಕ್ಷೆ ಮತ್ತು 2,000 ರೂ. ದಂಡ ವಿಧಿ ಹೈಕೋರ್ಟ್ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular