HomeLatest NewsBIG NEWS: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಪ್ರವಾಸಿ ಬಸ್

BIG NEWS: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಪ್ರವಾಸಿ ಬಸ್

ಮಡಿಕೇರಿ: ಪ್ರವಾಸಿಗರ ಬಸ್ ರಸ್ತೆ ಮಧ್ಯೆಯೇ ಹೊತ್ತಿ ಉರಿದು ಬೆಂಕಿಗಾಹುತಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಕುಟ್ಟ ಬಳಿ ನಡೆದಿದೆ.

ಕೇರಳ ನೊಂದಣಿಯ ಖಾಸಗಿ ಬಸ್ ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರವಾಸಿಗರು ಮೈಸೂರಿನಲ್ಲಿಯೇ ಇಳಿದಿದ್ದರಿಂದ ಬಸ್ ನಲ್ಲಿ ಚಾಲಕ ಹಾಗೂ ನಿರ್ವಾಹಕ ಇಬ್ಬರೇ ಇದ್ದರು.

ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ತಕ್ಷಣ ಬಸ್ ನಿಲ್ಲಿಸಿ ಇಬ್ಬರೂ ಬಸ್ ನಿಂದ ಇಳಿದು ದೂರು ಸರಿದಿದ್ದರು. ನೋಡ ನೋಡುತ್ತಿದ್ದಂತೆಯೇ ಬಸ್ ತುಂಬೆಲ್ಲ ಬೆಂಕಿ ಆವರಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular