HomeLatest NewsBREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ 'ಶಾಮನೂರು ಶಿವಶಂಕರಪ್ಪ' ಅಂತ್ಯಕ್ರಿಯೆ: ಕೊಡುಗೈ ದಾನಿ, ಕರ್ನಾಟಕ ರಾಜಕಾರಣದ...

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ‘ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ: ಕೊಡುಗೈ ದಾನಿ, ಕರ್ನಾಟಕ ರಾಜಕಾರಣದ ‘ಭೀಷ್ಮ’ ಇನ್ನು ನೆನಪು ಮಾತ್ರ

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ, ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಅಜಾತಶತೃ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ದಾವಣಗೆರೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.

ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ಇಂದು ಬೆಳಿಗ್ಗೆ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರ ದಾವಣಗೆರೆ ನಿವಾಸಕ್ಕೆ ತರಲಾಯಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳು, ಪೂಜಾ ಕೈಂಕರ್ಯಗಳು ನಡೆದ ಬಳಿಕ ಪಾರ್ಥಿವ ಶರೀರವನ್ನು ಹೈಸ್ಕೂಲು ಮೈದಾನಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಜನರು, ಬೆಂಗಲಿಗರು, ಅಭಿಮಾನಿಗಳು, ರಾಜಕೀಯ ಗಣ್ಯರು ಹಿರಿಯ ನಾಯಕನ ಅಂತಿಮ ದರ್ಶನ ಪಡೆದರು.

ಬಳಿಕ ಸಂಜೆ ಹೈಸ್ಕೂಲು ಮೈದಾನದಿಂದ ಕಲ್ಲೇಶ್ವರ ರೈಸ್ ಮಿಲ್ ಆವರಣದವರೆಗೆ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರ್ರದ ಅಂತಿಮ ಯಾತ್ರೆ ನಡೆಯಿತು. ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು. ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಪಾರ್ಥೀವ ಶರೀರ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಖಾದರ್, ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಸರ್ಕಾರದ ಸಚಿವರು, ಶಾಸಕರು, ಮಠಾಧೀಶರು ಸೇರಿದಂತೆ ಹಲವು ನಾಯಕರು ಪಕ್ಷಾತ್ತವಾಗಿ ಬಂದು ಅಂತಿಮ ದರ್ಶನ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ರಾಷ್ಟ್ರಧ್ವಜವನ್ನು ಪಾರ್ಥಿವಶರೀರದ ಮೇಲೆ ಹೊದಿಸಿ, ಪೊಲೀಸ್ ಸಿಬ್ಬಂದಿಗಳಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಸಿಡಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತಿಮ-ವಿಧಿವಿಧಾನ ನೆರವೇರಿತು. ಮಣ್ಣು ಹಾಕದೇ ಕ್ರಿಯಾಸಮಾಧಿಯಲ್ಲಿ ವಿಭೂತಿ ಹಾಕಿ ಶಿವ-ಪಾರ್ವತಿ ಪದ್ಧತಿ ಮೂಲಕ ಅಂತ್ಯಸಂಸ್ಕಾರಗಳು ನಡೆದವು. ಕ್ರಿಯಾ ವಿಧಾನ ನೆರವೇರಿಸಿ ಪಂಚಪೀಠಾಧೀಶ್ವರರ ಪಾದೋದಕ ಮೂಲಕ ಪೂಜೆ ಸಲ್ಲಿಸಿ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಲಾಯಿತು. ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲಿಯೇ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಿತು.

For Latest News Updates, Join Our Whatsapp Community🚩
RELATED ARTICLES

Most Popular