HomeLatest NewsBREAKING: ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ಧತಿಗೆ ಹೈಕೋರ್ಟ್ ನಕಾರ: 71 ರಿಟ್ ಅರ್ಜಿ...

BREAKING: ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ಧತಿಗೆ ಹೈಕೋರ್ಟ್ ನಕಾರ: 71 ರಿಟ್ ಅರ್ಜಿ ಇತ್ಯರ್ಥ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ಧತಿಗೆ ಹೈಕೋರ್ಟ್ ನಿರಾಕರಿಸಿದೆ. ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ್ದ 71 ರಿಟ್ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ.

ಅವಧಿ ಮುಗಿದ ನಗರಸಭೆ, ಪುರಸಭೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಕ್ಷೇತ್ರ ಪುನರ್ ವಿಂಗಡಣೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಸಂವಿಧಾನದ 243(ಯು) ರೀತ್ಯ ಐದು ವರ್ಷ ಅವಧಿ ನಿಗದಿಯಾಗಿದೆ. ಅವಧಿ ಮುಗಿದ ಮೇಲೆ ಹಾಲಿ ಸದಸ್ಯರು, ಅಧ್ಯಕ್ಷರನ್ನು ಮುಂದುವರೆಸಲಾಗದು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿದೆ ಎಂದು ಸರ್ಕಾರದ ಪರ ಹೆಚ್ಚುವರಿ ಎಜಿ ಪ್ರತಿಮಾ ಹೊನ್ನಾಪುರ ವಾದ ಮಂಡಿಸಿದ್ದಾರೆ. ಆಡಳಿತಾಧಿಕಾರಿ ನೇಮಕದಲ್ಲಿ ಮಧ್ಯ ಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular