HomeLatest Newsರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಲು ಆಗ್ರಹ

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಲು ಆಗ್ರಹ

ಬೆಂಗಳೂರು: ರಾಜ್ಯದ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಈ ಕುರಿತಾಗಿ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ.

ತಮಿಳುನಾಡಿನಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಕ್ಯಾನ್ಸರ್ ಗೆ ಕಾರಣವಾಗುವ HPV ವೈರಸ್ ತಡೆಯುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿಯೂ ಗರ್ಭಕಂಠ ಕ್ಯಾನ್ಸರ್ ಗೆ ಕಾರಣವಾಗುವ ವೈರಸ್ ತಡೆಯುವ ನಿಟ್ಟಿನಲ್ಲಿ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular