HomeLatest NewsBIG NEWS : 3 ತಿಂಗಳಿನಿಂದ ‘ಗೃಹಲಕ್ಷ್ಮಿ’ ಹಣ ಬಂದಿಲ್ಲ : ರಾಜ್ಯ ಸರ್ಕಾರದ ವಿರುದ್ಧ...

BIG NEWS : 3 ತಿಂಗಳಿನಿಂದ ‘ಗೃಹಲಕ್ಷ್ಮಿ’ ಹಣ ಬಂದಿಲ್ಲ : ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ |Gruha Lakshmi Scheme

ಬೆಂಗಳೂರು : 3 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ, ಇದನ್ನ ನಂಬಿಕೊಂಡು ನಾವು ಜೀವನ ಸಾಗಿಸುತ್ತಿದ್ದೇವೆ. ಹಣ ಬಾರದೇ 3 ತಿಂಗಳಾಯಿತು ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಹಲವು ಕಡೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು, 3 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ.. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.ಆದರೆ ನಮಗೆ 3 ತಿಂಗಳಿನಿಂದ ಹಣ ಬರ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1.80 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರು
ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿರುವ ಫಲಾನುಭವಿಗಳ ಪೈಕಿ 1.80 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ವಿಧಾನ ಪರಿಷತ್ ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇಲಾಖೆಯ ಅಧಿಕಾರಿಗಳು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ. ಕುಟುಂಬದ ಯಜಮಾನನಿಗೆ ಪ್ರತಿ ತಿಂಗಳು ತಲಾ ಎರಡು ಸಾವಿರ ರೂ. ನಂತೆ 2023ರ ಜೂನ್ 6ರಿಂದ ಗೃಹಲಕ್ಷ್ಮಿ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಅಕ್ಟೋಬರ್ ಅಂತ್ಯಕ್ಕೆ 1.28 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅರ್ಹ 1.24 ಕೋಟಿ ಮಹಿಳೆಯರಿಗೆ ಆಗಸ್ಟ್ ಅಂತ್ಯದವರೆಗೆ 22 ಕಂತಿನಲ್ಲಿ ಹಣ ಪಾವತಿಸಲಾಗಿದೆ. ಒಟ್ಟಾರೆ 52,416 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಸರ್ಕಾರದ ಮಾನದಂಡದ ಅನ್ವಯ ಕುಟುಂಬದ ಯಜಮಾನಿ ಅಥವಾ ಅವರ ಪತಿಯ ಐಟಿ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತವರು ಯೋಜನೆಯ ಫಲಾನುಭವಿಗಳಾಗಲು ಅರ್ಹರಲ್ಲ ಎಂದು ಹೇಳಲಾಗಿದೆ.

ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ

1) ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಈಕೆವೈಸಿ ಮಾಡಿಸಬೇಕು.

2)ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

3) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular