ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025-26ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆ 1, 2, 3ರ ವೇಳಾಪಟ್ಟಿ ಪ್ರಕಟಿಸಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಲ್ಲಿ www.kseab.karnataka.gov.in ಪ್ರಕಟಿಸಲಾಗಿದೆ.
ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ.





