ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಕ್ರಿಸ್ಮಸ್ ಪ್ರಯುಕ್ತ ಕೆಎಸ್ಆರ್ಟಿಸಿ 1000 ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆ ಮಾಡುವುದಾಗಿ ಘೋಷಿಸಿದೆ.
ಡಿಸೆಂಬರ್ 19, 20 ಮತ್ತು ಡಿಸೆಂಬರ್ 24ರಂದು ಬೆಂಗಳೂರಿನಿಂದ ವಿವಿಧ ಮಾರ್ಗಗಳಲ್ಲಿ 1000 ವಿಶೇಷ ಬಸ್ಗಳು ಸಂಚರಿಸಲಿದೆ.
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಶಿವಮೊಗ್ಗ, ಹಾಸನ, ಮಂಗಳೂರು, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಆನ್ಲೈನ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಬಹುದು ಎಂದು ಪ್ರಕಟಣೆ ಹೊರಡಿಸಿದೆ.

