HomeLatest NewsBIG NEWS : ಸಾರ್ವಜನಿಕರಿಗೆ ಗುಡ್ ನ್ಯೂಸ್ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ...

BIG NEWS : ಸಾರ್ವಜನಿಕರಿಗೆ ಗುಡ್ ನ್ಯೂಸ್ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುತ್ತದೆ. ಇದು ನಮ್ಮ ಸರ್ಕಾರದ ಗುರಿ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕುಶಾಲಪ್ಪ ಎಂ. ಪಿ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉತ್ತರ ನೀಡಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವುದು ಸರ್ಕಾರದ ಗುರಿ. ಅದರಂತೆಯೇ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡುವ ಮತ್ತು ದೂರದ ಜಿಲ್ಲೆಗಳ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೇರೆಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕಗಳನ್ನು ಆರಂಭಿಸಲಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular