HomeLatest Newsಗುಡ್ಡಗಾಡು ಜನರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ವೈದ್ಯಕೀಯ ಸೇವೆಗೆ ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ...

ಗುಡ್ಡಗಾಡು ಜನರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ವೈದ್ಯಕೀಯ ಸೇವೆಗೆ ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆ

ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಆರೋಗ್ಯ ಸೇತು’ ಸಂಚಾರಿ ಆರೋಗ್ಯ ಘಟಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ಹೇಳಿದ್ದಾರೆ.

ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular