ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಬೊಲೆರೊ ವಾಹನ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.
ಮೃತರನ್ನ ವಾಜಿದ್ (17) ರಾಜಾಹುಸೇಬ್ (17) ಆಸೀಫ್ (18) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಬೊಲೆರೊ ವಾಹನ ಚಾಲಕ ಎಸ್ಕೇಪ್ ಆಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ವಾಜಿದ್ ಮತ್ತು ಹುಸೇನ್ ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಆಸೀಫ್ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಎಂದು ಗುರುತಿಸಲಾಗಿದೆ.

