ಕೋಲಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿಗೆ ಬಿಜೆಪಿ ಕಾರ್ಯಕರ್ತರು ಕಾವಲು ಕುಳಿತಿದ್ದಾರೆ.
ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಕಾವಲು ಕುಳಿತುಕೊಂಡಿದ್ದಾರೆ. ಸಚಿವರು ಪ್ರಭಾವ ಬಳಸಿ ಕಡತ ತಿದ್ದುವ ಅಥವಾ ತೆಗೆದುಕೊಂಡು ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆ ಆಗುವವರೆಗೆ ದಾಖಲೆ ರಕ್ಷಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಕಾವಲು ಕುಳಿತಿದ್ದಾರೆ.
ನಿನ್ನೆ ಸದನದಲ್ಲಿ ಅಕ್ರಮದ ಬಗ್ಗೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದರು. ಕೃಷ್ಣ ಬೈರೇಗೌಡ ಭೂಕಬಳಿಕೆ ಮಾಡಿದ್ದಾರೆ ಎಂದು ಪ್ರಸ್ತಾಪಿಸಿದ್ದರು. ಹುಟ್ಟೂರು ಗರುಡ ಪಾಳ್ಯದಲ್ಲಿ ಸರ್ಕಾರಿ ಖರಾಬು ಜಮೀನು ಕಬಳಿಸಲಾಗಿದೆ. ಸರ್ವೆ ನಂಬರ್ 46, 47ರಲ್ಲಿ 21 ಎಕರೆ ಭೂಮಿಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಕೆ ಮಾಡಿರುವ ಆರೋಪ ಕೇಳಿ ಬಂದಿದೆ.

