HomeLive NewsBIG NEWS : 'ಪ್ರಧಾನಿ ಮೋದಿ' ಅಧಿಕಾರಕ್ಕೆ ಬಂದ ಮೇಲೆ ದೇಶದ ಸಾಲ 200 ಲಕ್ಷ...

BIG NEWS : ‘ಪ್ರಧಾನಿ ಮೋದಿ’ ಅಧಿಕಾರಕ್ಕೆ ಬಂದ ಮೇಲೆ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆ : CM ಸಿದ್ದರಾಮಯ್ಯ

ಬೆಳಗಾವಿ :   ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆ  ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಎನ್‌ಡಿಎ ಸರ್ಕಾರದ ದ್ವೇಷ ರಾಜಕೀಯವನ್ನು ಖಂಡಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಲಾಗುತ್ತಿದೆ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 200 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು ₹148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ, @BJP4India ಅಧಿಕಾರದಲ್ಲಿರುವ ಕಡೆಗಳಲ್ಲೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯವರು ಸ್ವಾರ್ಥ ಸಾಧನೆಯಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಲಾಗುತ್ತಿದೆ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 200 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು ₹148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದ್ದಾರೆ.

@narendramodi ಅವರು ಅಧಿಕಾರಕ್ಕೆ ಬಂದ ಮೇಲೆ ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು, ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular