HomeLatest NewsBREAKING : ಕಳ್ಳತನ ಪ್ರಕರಣ : ಸ್ಯಾಂಡಲ್'ವುಡ್ ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್.!

BREAKING : ಕಳ್ಳತನ ಪ್ರಕರಣ : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್.!

ಕಾರವಾರ: ಈ ಹಿಂದೆ ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.

ನಿನ್ನಲ್ಲೇನೋ ಹೇಳಬೇಕು ಎಂಬ ಸಿನಿಮಾ ನಿರ್ಮಿಸಿದ್ದ ಹರ್ಷವರ್ಧನ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ೨೦೧೭ರಲ್ಲಿ ಸಿದ್ದಾಪುರದ ಹಲಗೇರಿ ಬಳಿಯ ಕುಂಬಾರಕುಳಿ ಎಂಬಲ್ಲಿ ಮನೆ ಬಾಗಿಲುಮುರಿದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಹರ್ಷವರ್ಧನ್ ಜಾಮೀನು ಮೇಲೆ ಹೊರಬಂದಿದ್ದ. ಕೋರ್ಟ್ ನಿಂದ ೧೦ ಬಾರಿ ವಾರೆಂಟ್ ಜಾರಿಯಾದರೂ ವಿಚಾರಣೆಗೆ ಹಾಜರಾಗದೇ ಓಡಾಡುತ್ತಿದ್ದ.

ಈ ಹಿನ್ನೆಲೆಯಲ್ಲಿ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ನಿಟ್ಟಿನಲ್ಲಿ ಸಿದ್ದಾಪುರ ಪೊಲೀಸರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನಲೇನೋ ಹೇಳಬೇಕು ಎಂಬ ಸಿನಿಮಾ ನಿರ್ಮಾಣ ಮಾಡಿದ್ದ ಹರ್ಷವರ್ಧನ್ ಅದೇ ಸಿನಿಮಾದ ನಟಿ ಚೈತ್ರಾಳನ್ನು ಪ್ರೀತಿಸಿ ವಿವಾಹವಾಗಿದ್ದ. ದಂಪತಿಗೆ ಓರ್ವ ಮಗಳಿದ್ದಾಳೆ. ದಾಂಪತ್ಯದಲ್ಲಿ ವಿರಸ ಹಿನ್ನೆಲೆಯಲ್ಲಿ ಪತಿ-ಪತ್ನಿ ದೂರಾಗಿದ್ದರು. ಈ ಹಿಂದೆ ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ್ದ ಆರೋಪ ಕೂಡ ಹರ್ಷವರ್ಧನ್ ಮೇಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular