HomeLatest Newsಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗೆ ಶಿಶುಪಾಲನಾ ರಜೆ ಮಂಜೂರು

ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗೆ ಶಿಶುಪಾಲನಾ ರಜೆ ಮಂಜೂರು

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ(ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ಆದೇಶಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ಶಿಶು ಪಾಲನಾ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು.

ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧನಾ ಸಿಬ್ಬಂದಿಗಳಿಗೆ ಶಿಶು ಪಾಲನಾ ರಜೆಯನ್ನು ನೀಡಬೇಕಾದರೆ ಸಂಬಂಧಿತ ಬೋಧಕರ ರಜೆ ಅವಧಿಯಲ್ಲಿ ಪರ್ಯಾಯ ಬೋಧಕ ವ್ಯವಸ್ಥೆಯನ್ನು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ತನ್ನ ಸ್ವಂತ ಸಂಪನ್ಮೂಲದಿಂದ ಭರಿಸಿದ್ದಲ್ಲಿ ಸದರಿ ಪ್ರಸ್ತಾವನೆಯನ್ನು ಒಪ್ಪಬಹುದಾಗಿದೆ ” ಎಂದು ನಿರ್ದೇಶಿಸಿದ್ದು, ಇದನ್ನು ತಮ್ಮ ಕಛೇರಿ ವ್ಯಾಪ್ತಿಯ ಖಾಸಗಿ ಅನುದಾನಿತ ಕಾಲೇಜುಗಳ ಗಮನಕ್ಕೆ ತರಲು ಈ ಮೂಲಕ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular