ಬೆಂಗಳೂರು: ನಾಳೆ ಡಿ. 21ರಂದು ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ಸಂಚಾರ ವಿಳಂಬವಾಗಲಿದೆ. ನಾಳೆ ಬೆಳಗ್ಗೆ 7 ಗಂಟೆ ಬದಲಿಗೆ 8 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ.
ಯೆಲ್ಲೋ ಮಾರ್ಗದ ನವೀಕರಣ ಕಾರ್ಯ ಹಿನ್ನೆಲೆಯಲ್ಲಿ ತಡವಾಗಿ ಮೆಟ್ರೋ ಸಂಚಾರ ಆರಂಭವಾಗಲಿದೆ. ನೇರಳೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಇರುವುದಿಲ್ಲ. ನಾಳೆ ಎಲ್ಲೋ ಮಾರ್ಗದಲ್ಲಿ ಮಾತ್ರ ಮೆಟ್ರೋ ಸಂಚಾರ ವಿಳಂಬವಾಗಲಿದೆ.
ತುರ್ತು ವ್ಯವಸ್ಥೆಗಳ ನಿರ್ವಹಣೆ/ಮೇಲ್ದರ್ಜೆ ಕಾರ್ಯದಿಂದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(BMRCL) ಹಳದಿ ಮಾರ್ಗದಲ್ಲಿ ರೈಲು ಸೇವೆಗಳು ಡಿಸೆಂಬರ್ 21, 2025 ರಂದು (ಭಾನುವಾರ) ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಪ್ರಾರಂಭವಾಗಲಿವೆ.
ಅದರಂತೆ, ಹಳದಿ ಮಾರ್ಗದಲ್ಲಿ ಮೊದಲ ರೈಲು ಸೇವೆ ಬೆಳಿಗ್ಗೆ 7 ಗಂಟೆಗೆ ಬದಲಾಗಿ ಬೆಳಿಗ್ಗೆ 8:00 ಗಂಟೆಗೆ ಆರಂಭವಾಗಲಿದ್ದು, ಭಾನುವಾರದ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿದೆ. ಈ ಬದಲಾವಣೆಯು ಒಂದು ದಿನಕ್ಕೆ ಮಾತ್ರ ಅನ್ವಯಿಸುತ್ತದೆ, ಅಂದರೆ 21.12.2025 ಹಳದಿ ಮಾರ್ಗದಲ್ಲಿ.
ನೇರಳೆ ಮಾರ್ಗ ಮತ್ತು ಹಸಿರು ಮಾರ್ಗದ ರೈಲು ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಕೋರಲಾಗಿದೆ.


