HomeLatest NewsBIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ತೊಗರಿ...

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಸರ್ಕಾರ ಆದೇಶ

ಬೆಂಗಳೂರು : 2025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಸಲು ಆದೇಶಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಚಿವರು ಡಿ. 17 ರಂದು ಸರ್ಕಾರ ಆದೇಶ ಹೊರಡಿಸಿದ್ದು, ಕಲಬುರಗಿ ಜಿಲ್ಲಾಧಿಕಾರಿಯೊಂದಿಗೆ ನಡೆಸಿದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ, ಬೆಂಬಲ ಬೆಲೆ ಯೋಜನೆಯಡಿ ತೊಗರಿ ಪ್ರತಿ ಕ್ವಿಂಟಾಲ್ಗೆ ₹8,000 ದರದಲ್ಲಿ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಹಾಗೂ FRUITS ತಂತ್ರಾಂಶದಲ್ಲಿ ಲಭ್ಯವಿರುವಂತೆ ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಲ್ಲಿ ತೊಗರಿಯನ್ನು ಖರೀದಿಸಲು ಅನುಮತಿ ನೀಡಲಾಗಿರುತ್ತದೆ.

ಸರ್ಕಾರದ ಆದೇಶದಂತೆ ಕಲಬುರಗಿ ಜಿಲ್ಲೆಗೆ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ, ಕಲಬುರಗಿ ಸಂಸ್ಥೆಯನ್ನು ರಾಜ್ಯ ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 141 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು (PACS) ಮತ್ತು FPO ಗಳ ಮೂಲಕ ಪ್ರತಿಯೊಂದು ಖರೀದಿ ಕೇಂದ್ರಗಳಲ್ಲಿ POS ಯಂತ್ರಗಳಲ್ಲಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ UIDAI ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿರುತ್ತದೆ.

ನೋಂದಣಿ ಕಾರ್ಯ ಪ್ರಾರಂಭವಾಗಿದ್ದು, ಮಾರ್ಚ್ 06, 2026 ರವರೆಗೆ ಮುಂದುವರಿಯಲಿದೆ. ರೈತರಿಂದ ಖರೀದಿಸಿದ ಉತ್ಪನ್ನದ ಮೌಲ್ಯವನ್ನು DBT ಪೋರ್ಟಲ್ ಮೂಲಕ ಪಾವತಿಸಲಾಗುವುದು. ಬೆಂಬಲ ಬೆಲೆ ದರಕ್ಕಿಂತ ಹೆಚ್ಚಿನ ಮಾರುಕಟ್ಟೆ ಧಾರಣೆ ಇದ್ದಲ್ಲಿ, NAFED ಸಂಸ್ಥೆಯು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಇ-ಆಕ್ಷನ್ ಪೋರ್ಟಲ್ ಹಾಗೂ ಮುಕ್ತ ಮಾರುಕಟ್ಟೆಯಲ್ಲಿ ಬಫರ್ ಸ್ಟಾಕ್ ಉದ್ದೇಶಕ್ಕಾಗಿ ನೋಂದಾಯಿತ ರೈತರಿಂದ ಬೆಂಬಲ ಬೆಲೆಗಿಂತಲೂ ಹೆಚ್ಚಿನ ದರದಲ್ಲಿ ಖರೀದಿ ಕೈಗೊಳ್ಳಲಿದೆ.ಜಿಲ್ಲೆಯ ರೈತ ಬಾಂಧವರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಂಡು, ತಮ್ಮ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ (PACS) ಹಾಗೂ FPO ಗಳಿಗೆ ಮತ್ತು ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿರುವ ತೊಗರಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ತಾವು ಬೆಳೆದ ತೊಗರಿಯನ್ನು ನಿಗದಿತ ಅವಧಿಯಲ್ಲಿ ಮಾರಾಟಕ್ಕೆ ನೋಂದಾಯಿಸಿಕೊಂಡು ಮಾರಾಟ ಮಾಡಬೇಕಾಗಿ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಫೋನ್ ಸಂಖ್ಯೆಗಳನ್ನು ಸಂಪರ್ಕಿಸಬಹದಾಗಿದೆ.

  1. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಕಲಬುರಗಿ (KSCMF): ಮೊಬೈಲ್ ಸಂಖ್ಯೆ 9449864446
  2. ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಕಲಬುರಗಿ (KSPAML): ಮೊಬೈಲ್ ಸಂಖ್ಯೆ 9964474444.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular