ಚಿಕ್ಕಮಗಳೂರು: ಕುದುರೆಮುಖಕ್ಕೆ ಚಾರಣಕ್ಕೆ ತೆರಳುತ್ತಿದ್ದ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಂಚಿಗಾನೆ ತಿರುವಿಇನಲ್ಲಿ ನಡೆದಿದೆ.
41 ಜನ ಪ್ರವಾಸಿಗರನ್ನು ಹೊತ್ತು ಸಾಗಿದ್ದ ಖಾಸಗಿ ಬಸ್, ಕಳಸ ಸಮೀಪದ ಕಂಚಿಗಾನೆ ಬಳಿ ತಿರುವಿನಲ್ಲಿ ಪಲ್ಟಿಯಾಗಿದೆ. 14 ಜನರು ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

