HomeLive Newsರಾಜಕೀಯ ಒತ್ತಡಕ್ಕೆ ಮಣಿದು ಅಮಾನತು ಆರೋಪ: ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಿಕ್ಷಕಿ ಕಣ್ಣೀರು

ರಾಜಕೀಯ ಒತ್ತಡಕ್ಕೆ ಮಣಿದು ಅಮಾನತು ಆರೋಪ: ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಿಕ್ಷಕಿ ಕಣ್ಣೀರು

ಬೆಳಗಾವಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತನ್ನನ್ನು ರಾಜಕೀಯ ಒತ್ತಡಕ್ಕೆ ಮಣಿದು ಅಮಾನತು ಮಾಡಿದ್ದು, ತನಗೆ ನ್ಯಾಯ ಕೊಡಿಸುವಂತೆ ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ತನಗೆ ನ್ಯಾಯ ಕೊಡಿಸಿ. ಇಲ್ಲವಾದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಬೆಳಗಾವಿಯ ಹರಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸುರೇಖಾ ಬಾಯಣ್ಣವರ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರ ಚುನಾವಣೆ ನಡೆಸಲು ಪವನ್ ಪಾಟೀಲ್ ಮುಂದಾಗಿರುವುದನ್ನು ಗಮನಿಸಿ ಅಂದು ಚುನಾವಣೆಯನ್ನು ಶಿಕ್ಷಕಿ ಮುಂದೂಡಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಪವನ್ ಪಾಟೀಲ್ ಸ್ಥಳೀಯ ರಾಜಕೀಯ ಒತ್ತಡ ತಂದು ತನ್ನ ವಿರುದ್ಧ ಅಮಾನತು ಕ್ರಮ ಕೈಗೊಂಡಿದ್ದಾರೆ ಎಂದು ಶಿಕ್ಷಕಿ ದೂರಿದ್ದಾರೆ.

ಸ್ಥಳಿಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೆಸರು ಬಳಸಿ ಶಿಕ್ಷಣಾಧಿಕಾರಿ ಮೇಲೆ ಒತ್ತಡ ಹೇರಿ ಸುರೇಖಾ ಅವರನ್ನು ಅಮಾನತು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಲೆ ಆಡಳಿತದಲ್ಲಿ ರಾಜಕೀಯ ನಾಯಕರು ಪ್ರವೇಶಿಸುವುದನ್ನು ತಡೆಯುವಂತೆ ಹಾಗೂ ತನ್ನ ಅಮಾನತು ಆದೇಶ ಹಿಂಪಡೆದು, ತನಗೆ ನ್ಯಾಯ ಕೊಡಿಸುವಂತೆ ಶಿಕ್ಷಕಿ ಮನವಿ ಮಾಡಿದ್ದಾರೆ. ತನಗೆ ನ್ಯಾಯ ಕೊಡಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular