ಹಾವೇರಿ: ಆಕಸ್ಮಿಕ ಬೆಂಕಿ ಅವಘಡಕ್ಕೆ ಮೆಕ್ಕೆಜೋಳದ ರಾಶಿಗಳು ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿ ಹಾಗೂ ಕುರುಬರಮಲ್ಲೂರು ಗ್ರಾಮದಲ್ಲಿ ನಡೆದಿದೆ.
ಇಲ್ಲಿನ 66 ರೈತರಿಗೆ ಸೇರಿದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಮೆಕ್ಕೆಜೋಳ ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ರೈತರ ಜೀವನಾಧಾರವಾಗಿದ್ದ ಮೆಕ್ಕೆಜೋಳದ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅನ್ನದಾತರು ಕಣ್ಣೀರಿಟ್ಟಿದ್ದಾರೆ.

