HomeLatest NewsBREAKING: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ: ಕೃತ್ಯ ಎಸಗಿದ ವ್ಯಕ್ತಿ, ಹೋಂ ಸ್ಟೇ ಮಾಲೀಕ ಸೇರಿ...

BREAKING: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ: ಕೃತ್ಯ ಎಸಗಿದ ವ್ಯಕ್ತಿ, ಹೋಂ ಸ್ಟೇ ಮಾಲೀಕ ಸೇರಿ ಮೂವರಿಗೆ 20 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಮತ್ತು ಸಹಕಾರ ನೀಡಿದ ಹೋಂ ಸ್ಟೇ ಮಾಲೀಕ ಸೇರಿ ಮೂವರಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(FTSC-1) 20 ವರ್ಷ ಜೈಲು ಶಿಕ್ಷೆ ವಿಧಿಸಿದೆ

 2023ನೇ ಸಾಲಿನಲ್ಲಿ 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ದಿನಾಂಕ: 11-09-2023 ರಂದು ಬಲವಂತವಾಗಿ ಬಾಲಕಿಯ ಕೈ ಹಿಡಿದು ಎಳೆದು ಕಾರ್ ನಲ್ಲಿ ಕೂರಿಸಿಕೊಂಡು, ಅನಧಿಕೃತ ಹೋಂಸ್ಟೇ ಒಂದಕ್ಕೆ ಕರೆದು ಕೊಂಡು ಹೋಗಿ ಆಕೆಯ ಮೇಲೆ  ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಹಾಗೂ ಯಾತ್ರಿ ನಿವಾಸದಲ್ಲಿ  ತಂಗಲು ಬಂದ ಆರೋಪಿ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಂಬಂಧಿಸಿದ ಯಾವುದೇ ಸೂಕ್ತ ದಾಖಲೆಗಳನ್ನು ಪಡೆಯದೇ ಹಾಗೂ ವಯಸ್ಸನ್ನು ಪರಿಶೀಲಿಸದೆಯೇ ಪದೇ ಪದೇ ಉಳಿದುಕೊಳ್ಳಲು ಅವಕಾಶ ನೀಡಿದ ಅನಧಿಕೃತ ಹೋಂಸ್ಟೇ ನ 58 ವರ್ಷದ ಮಾಲಿಕ ಹಾಗೂ 24 ವರ್ಷದ ರೂಮ್ ಬಾಯ್ ಇಬ್ಬರೂ ಸಹ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಲು ಸಹಕಾರ ನೀಡಿರುವುದು ತನಿಖೆಯಿಂದ ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖಾಧಿಕಾರಿ ಸಾಗರ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಗೋಪಾಲಕೃಷ್ಣ ಟಿ. ನಾಯಕ್ ಅವರು ಸದರಿ ಪ್ರಕರಣದಲ್ಲಿ ಮೂರು ಜನರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಶಿವಮೊಗ್ಗ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಮೂವರು ಆರೋಪಿತರಿಗೆ 20 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ 1ನೇ ಆರೋಪಿಗೆ 71,000ರೂ.- 2ನೇ ಮತ್ತು 3ನೇ ಆರೋಪಿಗೆ ತಲಾ 10,000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular