HomeLive NewsBREAKING: ಬೈಕ್ ಅಪಘಾತ: ಶಾಸಕ ಮಹೇಶ್ ಟೆಂಗಿನಕಾಯಿ ಕಾರು ಚಾಲಕ ದುರ್ಮರಣ

BREAKING: ಬೈಕ್ ಅಪಘಾತ: ಶಾಸಕ ಮಹೇಶ್ ಟೆಂಗಿನಕಾಯಿ ಕಾರು ಚಾಲಕ ದುರ್ಮರಣ

ಹುಬ್ಬಳ್ಳಿ: ಬೈಕ್ ಅಪಘಾತದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಂಜುನಾಥ್ ಹೂಗಾರ್ (45) ಮೃತ ಕಾರು ಚಾಲಕ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಮೂಲದ ಮಂಜುನಾಥ್ ನಿನ್ನೆ ರಾತ್ರಿ ಬೈಕ್ ನಲ್ಲಿ ತಮ್ಮ ಗ್ರಾಮಕ್ಕೆ ಹೋಗುತ್ತಿದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಮಂಜುನಾಥ್ ಹೂಗಾರ್ ಕೊನೆಯುಸಿರೆಳೆದಿದ್ದಾರೆ.

ತಮ್ಮ ಕಾರು ಚಾಲಕ ಮಂಜುನಾಥ್ ಅಗಲಿಕೆಗೆ ಶಾಸಕ ಮಹೇಶ್ ಟೆಂಗಿನ ಕಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular