HomeLive NewsBIG NEWS: ಮನೆಗೆ ಬಿಡುವುದಾಗಿ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಸ್ವಾಮೀಜಿಗೆ 35...

BIG NEWS: ಮನೆಗೆ ಬಿಡುವುದಾಗಿ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಸ್ವಾಮೀಜಿಗೆ 35 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಳಗಾವಿ: ಮನೆಗೆ ಬಿಡುತ್ತೇನೆ ಎಂದು ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದ ಕಾಮುಕ ಸ್ವಾನೀಜಿಗೆ ಬೆಳಗಾವಿಯ ನ್ಯಾಯಾಲಯ ೩೫ ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮ ಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇ.13 ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಬಿಡುವುದಾಗಿ ನಂಬಿಸಿ ತನ್ನ ಕಾರಿನಲ್ಲಿ ಕರೆದೊಯ್ದಿದ್ದ. ಬಳಿಕ ರಾಯಚೂರು, ಬಾಗಲಕೋಟೆ ಸೇರಿದಂತೆ ಹಲವೆಡೆ ಸುತ್ತಾಡಿಸಿ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ. ಬಳಿಕ ಸಂತ್ರಸ್ತೆಯನ್ನು ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದ.

ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ವಾಮೀಜಿ ವಿರುದ್ಧ ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಯಾಗಿತ್ತು. ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದ ಪೊಲೀಸರು ತನಿಖೆ ಬಳಿಕ ಸ್ವಾಮೀಜಿ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ತಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾಮೀಜಿ ವಿರುದ್ಧ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯ ಲೋಕೇಶ್ವರ ಸ್ವಾಮೀಜಿ ದೋಷಿ ಎಂದು ತೀರ್ಪು ನೀಡಿದ್ದು, 35 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular