ಬೆಂಗಳೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯ ವೇಳೆ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಇದೀಗ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಮತಗಳ್ಳತನ ನಡೆದಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತಾರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಪಟ್ಟಣ ಪಂಚಾಯಿ ಚುನಾವಣೆ ನಡೆಯುತ್ತಿದೆ. ಮತಗಟ್ಟೆ ಸಂಖ್ಯೆ 17ರಲ್ಲಿ ಮತಗಳ್ಳತನ ನಡೆದಿದೆ. ಮತದಾನಕ್ಕಾಗಿ ಮತಗಟ್ಟೆ ಕೇಂದ್ರಕ್ಕೆ ಬಂದ ಯುವಕ ತನ್ನ ವೋಟು ಅದಾಗಲೇ ಬೇರೊಬ್ಬರು ಹಾಕಿರುವುದನ್ನು ಕಂಡು ಶಾಕ್ ಆಗಿದ್ದಾನೆ.
ಈ ಬಗ್ಗೆ ಯುವಕ ಮತಗಟ್ಟೆ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ನಕಲಿ ಮತದಾನ ಮಾಡಲಾಗಿದ್ದು, ಗ್ರಾಮಸ್ಥರು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

