HomeLatest NewsBREAKING: ಕೃಷಿ ಕೆಲಸ ಮಾಡುತ್ತಿದ್ದಾಗ ದುರಂತ: ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

BREAKING: ಕೃಷಿ ಕೆಲಸ ಮಾಡುತ್ತಿದ್ದಾಗ ದುರಂತ: ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ಬೆಳಗಾವಿ: ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಹರಿದು ರೈತ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿಯಲ್ಲಿ ನಡೆದಿದೆ.

ಚಂದ್ರಯ್ಯ ಬಸಲಿಂಗಯ್ಯ ಮಠಪತಿ (65) ಮೃತ ದುರ್ದೈವಿ. ಜಮೀನಿನಲ್ಲಿ ಟ್ರ್ಯಾಕ್ಟರ್ ಕೆಲಸ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರೈತನ ಮೇಲೆ ಹರಿದಿದ್ದು, ಚಕ್ರಕ್ಕೆ ಸಿಲುಕಿದ ರೈತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular