HomeLatest NewsSHOCKING: ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸಿದ ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಗರ್ಭಿಣಿ ಪುತ್ರಿಯ ಭೀಕರ ಕೊಲೆ

SHOCKING: ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸಿದ ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಗರ್ಭಿಣಿ ಪುತ್ರಿಯ ಭೀಕರ ಕೊಲೆ

ಹುಬ್ಬಳ್ಳಿ: ಅನ್ಯ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ 19 ವರ್ಷದ ಪುತ್ರಿಯನ್ನು ತಂದೆ ಹಾಗೂ ಕುಟುಂಬದವರು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ.

ಮಾನ್ಯಾ ಪಾಟೀಲ್(19) ಕೊಲೆಯಾದ ಯುವತಿ. ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಸೇರಿದಂತೆ ನಾಲ್ಕೈದು ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಪ್ರಕಾಶಗೌಡ ಪಾಟೀಲ ಹಾಗೂ ಕುಟುಂಬದವರಾದ ವೀರನಗೌಡ, ಅರುಣ ಗೌಡ ಅವರನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಏಳೆಂಟು ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ತಿಳಿಸಿದ್ದಾರೆ.

ಮಾನ್ಯಾ ಪಾಟೀಲ್ ಹಾಗೂ ವಿವೇಕಾನಂದ ದೊಡ್ಡಮನಿ ಪ್ರೀತಿಸುತ್ತಿದ್ದರು. ಯುವತಿಯ ಕುಟುಂಬದವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ರಾಜೀ ಸಂಧಾನ ನಡೆದಿತ್ತು. ಎಂಟು ತಿಂಗಳ ಹಿಂದೆ ಇಬ್ಬರೂ ಮನೆಯಿಂದ ಓಡಿ ಹೋಗಿ ಮದುವೆಯಾಗಿದ್ದರು. ಮಾನ್ಯಾ 7 ತಿಂಗಳ ಗರ್ಭಿಣಿಯಾಗಿದ್ದರಿಂದ ಈ ಇನಾಂವೀರಾಪುರ ಗ್ರಾಮಕ್ಕೆ ಮರಳಿ ಬಂದಿದ್ದರು. ಈ ಸುದ್ದಿ ತಿಳಿದ ಯುವತಿಯ ತಂದೆ ಹಾಗೂ ಕುಟುಂಬದವರು ಭಾನುವಾರ ಸಂಜೆ ಮನೆ ಮತ್ತು ಹೊಲಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಹಲ್ಲೆ ಮಾಡಿದ್ದಾರೆ. ವಿವೇಕಾನಂದ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular