ಬೆಳಗಾವಿ: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹೊಸ ಕಂತು ಪಾವತಿಗೆ ಮುಹೂರ್ತ ಕೂಡಿ ಬಂದಿದೆ.
ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

