HomeLatest NewsBIG NEWS: ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್ ಕುಸಿದ ಗಾಳಿಯ ಗುಣಮಟ್ಟ: ಉಸಿರಾಡಲೂ ಸಾಧ್ಯವಾಗದ ವಾತಾವರಣ

BIG NEWS: ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್ ಕುಸಿದ ಗಾಳಿಯ ಗುಣಮಟ್ಟ: ಉಸಿರಾಡಲೂ ಸಾಧ್ಯವಾಗದ ವಾತಾವರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದರ ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ ಹಂತ ತಲುಪಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ್ನು ಮೀರಿಸುವ ಹಂತದಲ್ಲಿ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದು, ಉಸಿರಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಏರ್ ಕ್ವಾಲಿಟಿ ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಜನರನ್ನು ಆತಂಕಕ್ಕೀಡು ಮಾಡಿತ್ತು. ಇದೀಗ AQI ಬಳ್ಳಾರಿಯಲ್ಲಿ 200ರ ಗಡಿ ದಾಟಿದೆ. ಇದರೊಂದಿಗೆ PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಟದ ತೊಂದರೆ, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ.

ಬೆಂಗಳೂರಿನಲ್ಲಿ ಕಲೆದ ಕೆಲ ದಿನಗಳಿಂದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, 170 ರಿಂದ 200ರವೆಗೂ ಏರಿಳಿತ ಕಾಣುತ್ತಿದೆ. ಇಂದು 173ರಷ್ಟಿದೆ. ಬಳ್ಳಾರಿಯಲ್ಲಿ ಕಳೆದ ಎರಡು ದಿನಗಳಿಂದ ಗಾಳಿಯ ಗುಣಮಟ್ಟ 180ರ ಆಸು ಪಾಸಿನಲ್ಲಿತ್ತು. ಇಂದು ಧಿಡೀರನೆ 240ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ದಾಖಲಾದ ಅತೀ ಕಳಪೆ ಏರ್ ಕ್ವಾಲಿಟಿ ಇಂಡೆಕ್ಸ್ ಮೀರಿಸಿರಿರುವ ಬಳ್ಳಾರಿಯಲ್ಲಿ, PM2.5 ಪ್ರಮಾಣ 167ಕ್ಕೆ ತಲುಪಿದ್ದು, PM10 ಪ್ರಮಾಣ 230ಕ್ಕೆ ಇಳಿದಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳು ಕಾಡುತ್ತವೆ.

ಯಾವ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ:
ಬೆಂಗಳೂರು –173
ಮಂಗಳೂರು – 156
ಮೈಸೂರು – 139
ಬೆಳಗಾವಿ – 172
ಕಲಬುರ್ಗಿ – 124
ಬಳ್ಳಾರಿ – 240
ಹುಬ್ಬಳ್ಳಿ- 120
ವಿಜಯಪುರ –132
ಉಡುಪಿ – 146
ಶಿವಮೊಗ್ಗ – 92

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular