ಗದಗ : ಗದಗದ ಶಾಂತಿ ಚಿತ್ರಮಂದಿರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಥಿಯೇಟರ್ ಸುಟ್ಟು ಕರಕಲಾಗಿದೆ.
ಗದಗ ನಗರದ ಶಾಂತಿ ಚಿತ್ರಮಂದಿರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿತ್ರಮಂದಿರದಲ್ಲಿ ಚೇರು, ಪೀಠೋಪಕರಣ ಸ್ಪೀಕರ್ ಸೇರಿದಂತೆ ಎಲ್ಲವೂ ಸುಟ್ಟು ಭಸ್ಮವಾಗಿದೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಬೆಟಗೇರಿ ಠಾಣಾ ಪೊಲೀಸರು ಧಾವಿಸಿ ಬೆಂಕಿ ನಂದಿಸಿದ್ದಾರೆ.

