ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗುತ್ತಿದೆ. ಈ ನಡುವೆ ಏರ್ ಇಂಡಿಯಾ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿ ಏರ್ ಪೋರ್ಟ್ ನಲ್ಲಿಯೇ ತುರ್ತು ಭೂಸ್ಪರ್ಶವಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ AI887 ವಿಮಾನ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷತವಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆ ತಿಳಿಸಿದೆ.

