HomeLatest NewsBREAKING: ಮಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರ ಯತ್ನ: 'ಕೈ' ನಾಯಕರು ಪೊಲೀಸ್...

BREAKING: ಮಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರ ಯತ್ನ: ‘ಕೈ’ ನಾಯಕರು ಪೊಲೀಸ್ ವಶಕ್ಕೆ

ಮಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು, ಮಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಆರಂಭವಾದ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ಬಿಜೆಪಿ ಕಚೇರಿಯತ್ತ ಸಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ.

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular