HomeLatest News'ರಾಜ್ಯ ಸರ್ಕಾರಿ' ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ DCM ಡಿ.ಕೆ ಶಿವಕುಮಾರ್.!

‘ರಾಜ್ಯ ಸರ್ಕಾರಿ’ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ DCM ಡಿ.ಕೆ ಶಿವಕುಮಾರ್.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ನ್ನು ಡಿಸಿಎಂ ಡಿಕೆ ಶಿವಕುಮಾರ್ ಬಿಡುಗಡೆಗೊಳಿಸಿದ್ದಾರೆ.

ಇಂದು ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿದೆ ಎಂದು ಡಿಕೆಶಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಫರ್ ರಸ್ತೆಗಳ ಕಾಮಗಾರಿ ಪರಿಶೀಲನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರಮಂಗಲದಿಂದ ಸರ್ಜಾಪುರಕ್ಕೆ ಸಂಪರ್ಕ ಕಲ್ಪಿಸುವ ಬಫರ್ ರಸ್ತೆಯ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದೆ: ಪ್ರಮುಖ ರಸ್ತೆಗಳ ಟ್ರಾಫಿಕ್ ಕಡಿಮೆ ಮಾಡುವ ಸಲುವಾಗಿ ಬಫರ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ವಾಹನ ಸಂಚಾರ ಸುಲಭವಾಗಲಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜಕಾಲುವೆಗಳ ಬಫರ್ ವಲಯದಲ್ಲಿ ‘ಸಂಚಾರಯುಕ್ತ ಯೋಜನೆ’ ಅಡಿ 300 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು. ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಕ್ಕಾಗಿ ಸೇನೆಯವರು ನಮಗೆ ಜಾಗವನ್ನು ಬಿಟ್ಟುಕೊಟ್ಟಿದ್ದಾರೆ. ಎಂ.ಜಿ ರಸ್ತೆಯಿಂದ ಬೆಳ್ಳಂದೂರುವರೆಗೂ ಹೊಸ ರಸ್ತೆ ನಿರ್ಮಾಣವಾಗಲಿದೆ. ಬಫರ್ ವಲಯದ ರಸ್ತೆಯಲ್ಲಿ ಸಂಚರಿಸುವುದರಿಂದಾಗಿ ನಾಗರಿಕರಿಗೆ ಸುಮಾರು 10 ಕಿ.ಮೀ ಪ್ರಯಾಣ ಕಡಿಮೆ ಆಗುತ್ತದೆ. ನಮ್ಮ ಬೆಂಗಳೂರಿನ ಸಂಚಾರ ಸಮಸ್ಯೆಯನ್ನು ನಿಯಂತ್ರಣ ಮಾಡಲು ವಿಶೇಷವಾದ ಯೋಜನೆ ರೂಪಿಸಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular