HomeLatest NewsBREAKING: ಬೆಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಪತ್ನಿ ಕೊಲೆಗೈದು ಅಪಘಾತ ಕತೆ ಕಟ್ಟಿದ ಪತಿರಾಯ

BREAKING: ಬೆಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಪತ್ನಿ ಕೊಲೆಗೈದು ಅಪಘಾತ ಕತೆ ಕಟ್ಟಿದ ಪತಿರಾಯ

ಬೆಂಗಳೂರು: ತಾನು ಖರೀದಿಸಿದ ನಿವೇಶನದಲ್ಲಿ ಪೂಜೆ ಸಲ್ಲಿಸಲು ಪತ್ನಿಯನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಅಪಘಾತದ ನಾಟಕ ಸೃಷ್ಟಿಸಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯ ಪತಿಯನ್ನು ಬಾಗಲೂರು ಠಾಣೆ ಪೋಲೀಸರು ಬಂಧಿಸಿದ್ದಾರೆ.

ಚಿಕ್ಕಬೊಮ್ಮಸಂದ್ರ ನಿವಾಸಿ ಗಾಯತ್ರಿ(54) ಕೊಲೆಯಾದ ಮಹಿಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ ಅನಂತ್(64) ಅವರನ್ನು ಪೊಲೀಸರು ಬಂಧಿಸಿದ್ದಾರೆ, ಎರಡು ದಿನದ ಹಿಂದೆ ಬಿಟ್ಟಗಾನಹಳ್ಳಿ ಸಮೀಪ ನಿರ್ಮಾಣ ಹಂತದ ಬಡಾವಣೆಗೆ ಗಾಯತ್ರಿ ಅವರನ್ನು ಕರೆದುಕೊಂಡು ಹೋಗಿದ್ದ ಆರೋಪಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ನಂತರ ಅಪಘಾತದ ಕತೆ ಕಟ್ಟಿ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸೇರಿಸಿದ್ದಾನೆ. ಪರಿಶೀಲನೆಯ ವೇಳೆ ಇದು ಅಪಘಾತವಲ್ಲ ಕೊಲೆ ಎನ್ನುವುದು ಗೊತ್ತಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಚಿಕ್ಕಬೊಮ್ಮಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಯತ್ರಿ ಶಿಕ್ಷಕಿ ಆಗಿದ್ದರು. ಪತಿ ಮತ್ತು ಮಗಳ ಜೊತೆಗೆ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಪತಿ ಅನಂತ್ ನಿವೃತ್ತರಾದ ಬಳಿಕ ಎಲೆಕ್ಟ್ರಿಕ್ ಕೆಲಸ ಮಾಡಿಕೊಂಡಿದ್ದರು. ಪುತ್ರಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ. ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯ ಕೆಲವು ದಿನಗಳಿಂದ ಮನಸ್ತಾಪ ಉಂಟಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ಸಂಜೆ ಮನೆಯಲ್ಲಿದ್ದ ಪತ್ನಿಯನ್ನು ನಿವೇಶನ ಪೂಜೆ ಮಾಡಿ ಬರೋಣ ಎಂದು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಿಟ್ಟಾಗನಹಳ್ಳಿ ಸಮೀಪ ನಿರ್ಮಾಣ ಹಂತದ ಬಡಾವಣೆಗೆ ದಂಪತಿ ಬಂದಿದ್ದು, ಪತ್ನಿಯನ್ನು ಕೆಳಗೆ ಬೀಳಿಸಿ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ರಾತ್ರಿ ಆಂಬುಲೆನ್ಸ್ ಗೆ ಕರೆ ಮಾಡಿ ಪತ್ನಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾನೆ. ಪೊಲೀಸರ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular