ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು( Lokayukta Raid) ದಾಳಿ ನಡೆಸಿದ್ದಾರೆ.ರಾಯಚೂರು ಜಿಲ್ಲೆಯ 4 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಚೂರು, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಸೇರಿದಂತೆ ಹಲವು ಕಡೆ ಮತ್ತೆ ಅಧಿಕಾರಿಗಳು ಇಂದು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬಾಗಲಕೋಟೆಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಸ್ ಕಾಂಬಳೆ ಮನೆ ಮೇಲೆ ದಾಳಿ ನಡೆಸಲಾಗಿದೆ. ನರಗುಂದದಲ್ಲೂ ಕಾಂಬಳೆ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಸಿದ ಆರೋಪ, ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಬಾಗೇವಾಡಿಯ ಕೃಷಿ ಇಲಾಖೆ ನಿರ್ದೇಶಕನ ಮನೆ ಮೇಲೆ ದಾಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಮನೆ ಮೇಲೆ ದಾಳಿ ನಡೆದಿದೆ. ರಾಯಚೂರು ಜಿಲ್ಲೆಯಲ್ಲಿ ನಿವೃತ್ತ ಮಹಿಳಾ ಅಧಿಕಾರಿ ವಿಜಯಲಕ್ಷ್ಮಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಚೂರು, ಬಾಗಲಕೋಟೆ, ವಿಜಯಪುರ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

