HomeLatest Newsಉದ್ಯೋಗ ವಾರ್ತೆ : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿಗೆ...

ಉದ್ಯೋಗ ವಾರ್ತೆ : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ಅರೆವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ (1)ರ ಪತ್ರಗಳಲ್ಲಿ ಕೋರಲಾದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇದ್ದ ವಿವಿಧ ವೃಂದದ 877 ಅರವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗಳೊಂದಿಗೆ ಸಮಾಲೋಚಿಸಲಾಗಿರುತ್ತದೆ.

ಅರೆ ಅದರನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ವೈದ್ಯಕೀಯ ಹುದ್ದೆಗಳನ್ನು ನೇರನೇಮಕಾತಿಯಿಂದ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡದಿರುವ ಹಿನ್ನೆಲೆಯಲ್ಲಿ तं : DPAR 6 PLX 2012, ໖: 06.11.2013 1 2 10(2) ថ ថ ಇಲಾಖೆಯ ಸಹಮತಿಯಿದೆ ಎಂದು ಪರಿಭಾವಿಸಿ ಸದರಿ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರನೇಮಕಾತಿಯಿಂದ ಭರ್ತಿ ಮಾಡಲು ಕ್ರಮ ಕೈಗೊಳ್ಳಬಹುದೇ ಎಂಬ ಬಗ್ಗೆ ಸಿಆಸು ಇಲಾಖೆಯ ಅಭಿಪ್ರಾಯವನ್ನು ಕೋರಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಸೇವಾ ನಿಯಮಗಳು) ಟಿಪ್ಪಣಿಯ ಸಂಖ್ಯೆ: ಸಿಆಸುಇ 38 ಹೆಚ್ಕೆಪಿ 2025, ದಿನಾಂಕ: 18/10/2025 ರಲ್ಲಿ ಆರ್ಥಿಕ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಸಹಮತಿ ನೀಡದಿರುವ ಹಿನ್ನೆಲೆಯಲ್ಲಿ ಅಧಿಸೂಚನೆ ಸಂಖ್ಯೆ: DPAR 06 PLX 2012, ದಿನಾಂಕ: 06.11.2013ರ ನಿಯಮ 10(2) ರನ್ವಯ ಆರ್ಥಿಕ ಇಲಾಖೆಯ ಸಹಮತಿ ಇದೆ ಎಂದು ಪರಿಭಾವಿಸಿ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮಾಡಲು ಮುಖ್ಯ ಕಾರ್ಯದರ್ಶಿಯವರ ಅನುಮೋದನೆಯೊಂದಿಗೆ ಸೂಚಿಸಿರುತ್ತದೆ.

ಹೀಗಾಗಿ ಆರ್ಥಿಕ ಇಲಾಖೆಯ ಸುತ್ತೋಲೆ ಸಂ: ಆಇ 02 ಬಿಇಎಂ 2021, ದಿನಾಂಕ 24.112021ರ ಕ್ರಮ ಸಂ: 4 ರಲ್ಲಿ ನೇರನೇಮಕಾತಿಯದಿ ಭರ್ತಿಯಾಗುವ ಹುದ್ದೆಗಳಿಗೆ ಆಯವ್ಯಯದಲ್ಲಿ ಸೂಕ್ತ ಅನುದಾನವನ್ನು ಕಲ್ಪಿಸಿಕೊಳ್ಳುವ ಸಲುವಾಗಿ ನೇಮಕಾತಿ ಆದೇಶ ಹೊರಡಿಸುವ ಮುನ್ನ ಆರ್ಥಿಕ ‘ಇಲಾಖೆಯ ಅನುಮತಿ ಪಡೆಯತಕ್ಕದು ಎಂಬುದಾಗಿ ತಿಳಿಸಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ 877 ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅಗತ್ಯವಿರುವ ಸೂಕ್ತ ಅನುದಾನವನ್ನು ಕಲ್ಪಿಸಿಕೊಡುವಂತೆ ಆರ್ಥಿಕ ಇಲಾಖೆಯನ್ನು ದಿನಾಂಕ: 14/11/2025 ರಂದು ಕೋರಲಾಗಿರುತ್ತದೆ (ವ್ರತಿ ಲಗತ್ತಿಸಿದ).

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ಈ ಕೆಳಕಂಡ ವಿವಿಧ ವೃಂದದ 877 ಅರವೈದ್ಯಕೀಯ ಹುದ್ದೆಗಳನ್ನು ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಮೀಸಲಾತಿ ನಿಯಮಗಳನ್ನು ಮತ್ತು ಸರ್ಕಾರದ ಆದೇಶ ಸಂಖ್ಯೆ: ಆಕುಕ 333 ಹೆಚ್ಎಎಂ 2023, ದಿನಾಂಕ: 21/12/2024 ರಲ್ಲಿ ನಿಗಧಿವಡಿಸಿರುವ ಷರತ್ತುಗಳಲ್ಲಿನ ಕ್ರಮ ಸಂಖ್ಯೆ (2), (5) ಮತ್ತು (6) ರಲ್ಲಿನ ಕ್ರಮಗಳನ್ನು ಅನುಸರಿಸಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ತಮಗೆ ತಿಳಿಸಲು ನಿರ್ದೇಶಿತನಾಗಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಗಳು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular