HomeLatest Newsಪತ್ರಕರ್ತರಿಗೆ ಗುಡ್ ನ್ಯೂಸ್: ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಜಾರಿ, ಗ್ರಾಮೀಣ ಬಸ್ ಪಾಸ್ ಷರತ್ತು...

ಪತ್ರಕರ್ತರಿಗೆ ಗುಡ್ ನ್ಯೂಸ್: ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಜಾರಿ, ಗ್ರಾಮೀಣ ಬಸ್ ಪಾಸ್ ಷರತ್ತು ಸಡಿಲಿಕೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪತ್ರಕರ್ತರಿಗಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ನೀಡಬೇಕು ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಆಗ್ರಹಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಈ ಯೋಜನೆಗಳನ್ನು ಜಾರಿಗೆ ನೀಡಿದ್ದರೂ, ಇನ್ನೂ ಒಬ್ಬ ಪತ್ರಕರ್ತರಿಗೂ ಈ ಯೋಜನೆ ಪ್ರಯೋಜನ ಸಿಗಲಿಲ್ಲ. ಇದಕ್ಕೆ ಕಠಿಣ ಷರತ್ತುಗಳು ಕಾರಣವಾಗಿವೆ ಎನ್ನುವುದನ್ನು ವಿವರಿಸಿದ್ದಾರೆ.

 ಇದಕ್ಕೆ ತಕ್ಷಣವೇ ಸ್ಪಂಧಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಮಾತ್ರವೇ ಸೀಮಿತ ಮಾಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮಾನ್ಯತೆ ಪಡೆದಿರುವ ಪತ್ರಿಕೆಯಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

 ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮೊದಲ ಹಂತದಲ್ಲಿ 5,500 ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ನೀಡಬೇಕಾಗಿತ್ತು. ಆದರೆ ಈ ಯೋಜನೆಯೂ ಸರಿಯಾಗಿ ಜಾರಿಯಾಗದ ಕಾರಣ ಗ್ರಾಮೀಣ ಪತ್ರಕರ್ತರನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ಮನವಿಯಲ್ಲಿ ವಿವರಿಸಲಾಗಿದೆ.

 ಕಠಿಣ ಷರತ್ತುಗಳನ್ನು ಸಡಿಲಿಸುವಂತೆ ಹಲವು ಬಾರಿ ಪತ್ರ ಬರೆದು ಸರ್ಕಾರಕ್ಕೆ ವಿನಂತಿಸಲಾಗಿದೆ.  ಆದರೂ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ ಎನ್ನುವ ಅಂಶವನ್ನು ಮನವಿಯಲ್ಲಿ ತಿಳಿಸಲಾಗಿದೆ.

 ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆಯಲು ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಪೂರ್ಣಾವಧಿ ನೇಮಕಾತಿ ಇರುವುದಿಲ್ಲ. ಆದುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪತ್ರಿಕಾ ಸಂಸ್ಥೆಗಳು/ಸಂಪಾದಕರು ನೀಡುವ ದೃಢೀಕರಣ ಆಧರಿಸಿ ಮತ್ತು ಬೈಲೈನ್‌ನ್ನು ಮಾನದಂಡವಾಗಿಸಿಕೊಂಡು ಬಸ್‌ಪಾಸ್ ನೀಡಬೇಕೆಂದು ಮನವಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.

 ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ, ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಮನವಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular