ಬೆಂಗಳೂರು : ಜನವರಿ 2 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಶುಕ್ರವಾರ ಸಂಜೆ 4:00 ಗಂಟೆಗೆ ಸಚಿವ ಸಂಪುಟದ 2026ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.


